ಇವನು ಗೆಳೆಯನಲ್ಲ

ಮುಂಗಾರು ಮಳೆ
ಮನೋ ಮೂರ್ತಿ

ಇವನು ಗೆಳೆಯನಲ್ಲ ಗೆಳತಿ ನಾನು ಮೊದಲೇ ಅಲ್ಲ

ಇವನು ಇನಿಯನಲ್ಲ ತುಂಬಾ ಸನಿಹ ಬಂದಿಹನಲ್ಲ

ನೋವಿನಲ್ಲೂ ನಗುತಿಹನಲ್ಲ ಯಾಕೆ ಈ ಥರ

ಜಾಣ ಮನವೇ ಕೇಳು ಜಾರಬೇಡ ಇವನ ಕಡೆಗೆ

ಯಾಕೆ ನಿನಗೆ ಸಲ್ಲದ ಸಲಿಗೆ| ಇರಲಿ ಅಂತರ || ಪ ||

ಒಲವ ಹಾದಿಯಲ್ಲಿ ಇವನು ನನಗೆ ಹೂವೋ ಮುಳ್ಳೋ

ಮನದ ಕಡಲಿನಲ್ಲಿ ಇವನು ಅಲೆಯೋ ಭೀಕರ ಸುಳಿಯೊ

ಅರಿಯದಂಥ ಹೊಸ ಕಂಪನವೊ ಯಾಕೋ ಕಾಣೆನೊ

ಅರಿತೊ ಮರೆತೊ ಜೀವ ವಾಲದಂತೆ ಇವನ ಕಡೆಗೆ

ಸೋಲದಂತೆ ಕಾಯೇ ಮನವೆ ಉಳಿಸು ನನ್ನನು || ೧ ||

ಇವನು ಇನಿಯಲ್ಲ ತುಂಬ ಸನಿಹ ಬಂದಿಹನಲ್ಲ

ತಿಳಿದು ತಿಳಿದು ಇವನು ತನ್ನ ತಾನೇ ಸುಡುತಿಹನಲ್ಲ

ಒಲುಮೆ ಎಂಬ ಸುಳಿಗೆ ಈಜು ಬರದೆ ಇಳಿದಿಹನಲ್ಲ

ಸಾವಿನಲ್ಲು ನಗುವುದ ಬಲ್ಲ ಏನೋ ಕಳವಳ

ಮುಳುಗುವವನ ಕೂಗು ಚಾಚುವಂತೆ ಮಾಡಿದೆ ಕೈಯ

ಜಾರಿ ಬಿಡುವುದೇ ಈ ಹೃದಯ ಏನೋ ತಳಮಳ|| ೨ ||

ಇವನು ಇನಿಯನಲ್ಲ ತುಂಬ ಸನಿಹ ಬಂದಿಹನಲ್ಲ

ಮುಂಗಾರು ಮಳೆ

ಚಿತ್ರ ನೋಡಿ