ನಿನ್ನಿಂದಲೇ
ಮಿಲನನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ
ಈ ಎದೆಯಲ್ಲಿ ಸಿಹಿಯಾದ ಕೋಲಾಹಲ
ನನ್ನೆದುರಲ್ಲೇ ನೀ ಹೀಗೆ ಬಂದಾಗಲೇ
ನಿನ್ನ ತುಟಿಯಲ್ಲಿ ನಗುವಾಗುವ ಹಂಬಲ
ನಾ ನಿಂತಲ್ಲೇ ಹಾಳಾದೆ ನಿನ್ನಿಂದಲೇ|| ಪ ||
ಇರುಳಲ್ಲಿ ಜ್ವರದಂತೆ ಕಾಡಿ ಈಗ
ಹಾಯಾಗಿ ನಿಂತಿರುವೆ ಸರಿಯೇನು
ಬೇಕಂತಲೇ ಮಾಡಿ ಏನೋ ಮೋಡಿ
ಇನ್ನೆಲ್ಲೋ ನೋಡುವ ಪರಿಯೇನು
ಈ ಮಾಯೆಗೆ ಈ ಮರುಳಿಗೆ ನಿನ್ನಿಂದ ಕಳೆ ಬಂದಿದ || ೧ ||
ಹೋದಲ್ಲಿ ಬಂದಲ್ಲಿ ಎಲ್ಲ ನಿನ್ನ
ಸೊಂಪಾದ ಚೆಲುವಿನ ಗುಣಗಾನ
ಕೇದಿಗೆ ಗರಿಯಂಥ ನಿನ್ನ ನೋಟ
ನನಗೇನೋ ಅಂದಂತೆ ಅನುಮಾನ
ನಿನ್ನಿಂದಲೆ ಸದ್ದಿಲ್ಲದೆ ಮುದ್ದಾದ ಕರೆ ಬಂದಿದೆ || ೨ ||
ಮಿಲನ
ಚಿತ್ರ ನೋಡಿ