ಹಾಲಲ್ಲಾದರು ಹಾಕು ನೀರಲ್ಲಾದರು ಹಾಕು
ಹಾಲಲ್ಲಾದರು ಹಾಕು ನೀರಲ್ಲಾದರು ಹಾಕು ರಾಘವೇಂದ್ರ
ಹಾಲಲ್ಲಿ ಕೆನೆಯಾಗಿ, ನೀರಲ್ಲಿ ಮೀನಾಗಿ ಹಾಯಾಗಿರುವೆ ರಾಘವೇಂದ್ರ || ಪ ||
ಮುಳ್ಳಲ್ಲಾದರು ನೂಕು, ಕಲ್ಲಲ್ಲಾದರು ನೂಕು ರಾಘವೇಂದ್ರ || 2 ||
ಆಆ ಆ ಹಾ ಆಆ ಹಾಆಆ ಆಆಆಆಆಆ
ಮುಳ್ಳಲ್ಲಾದರು ನೂಕು, ಕಲ್ಲಲ್ಲಾದರು ನೂಕು ರಾಘವೇಂದ್ರ
ಮುಳ್ಳಲ್ಲಿ ಮುಳ್ಳಾಗಿ, ಕಲ್ಲಲ್ಲಿ ಕಲ್ಲಾಗಿ ಒಂದಾಗಿರುವೆ ರಾಘವೇಂದ್ರ
ಬಿಸಿಲಲ್ಲಿ ಒಣಗಿಸು, ನೆರಳಲ್ಲಿ ಮಲಗಿಸು ರಾಘವೇಂದ್ರ
ಬಿಸಿಲಲ್ಲಿ ಕೆಂಪಾಗಿ, ನೆರಳಲ್ಲಿ ತಂಪಾಗಿ ನಗುನಗುತ ಇರುವೆ ರಾಘವೇಂದ್ರ
ಸುಖವನ್ನೇ ನೀಡೆಂದು ಎಂದೂ ಕೇಳೆನು ನಾನು ರಾಘವೇಂದ್ರ || 2 ||
ಹಾ ಆ ಹಾ ಆಆ ಹಾಆಆ ಆಆಆಆಆಆ
ಸುಖವನ್ನೇ ನೀಡೆಂದು ಎಂದೂ ಕೇಳೆನು ನಾನು ರಾಘವೇಂದ್ರ
ಮುನ್ನ ಮಾಡಿದ ಪಾಪ ಯಾರ ತಾತನ ಗಂಟು ನೀನೇ ಹೇಳು ರಾಘವೇಂದ್ರ
ಎಲ್ಲಿದ್ದರೇನು ನಾ ಹೇಗಿದ್ದರೇನು ನಾ ರಾಘವೇಂದ್ರ
ನಿನ್ನಲ್ಲಿ ಶರಣಾಗಿ ನೀ ನನ್ನ ಉಸಿರಾಗಿ ಬಾಳಿದರೆ ಸಾಕು ರಾಘವೇಂದ್ರ
ಪರಿಕರಗಳು
ಸಾಲದ ಮಾಸಿಕ ಕಂತು (EMI)
ಸಾಲದ ಮಾಸಿಕ ಕಂತು (EMI) ಎಂದರೆ ಹಣಕಾಸು ಸಂಸ್ಥೆಯೊಂದರಿಂದ ಸಾಲ ತೆಗೆದುಕೊಂಡಾಗ, ಪ್ರತಿ ಮಾಸ ಅಥವಾ ಪ್ರತಿಕಾಲದಲ್ಲಿ ಪಾವತಿಸಬೇಕಾದ ನಿಗದಿತ ಮೊತ್ತ. ಮಾಸಿಕ ಕಂತನ್ನು ಆನ್ಲೈನ್ನಲ್ಲಿ ಲೆಕ್ಕಾಚಾರ ಮಾಡಿ.
ಹೆಸರು ಹುಡುಕಿ
ಲಿಂಗ, ಪ್ರಕಾರ, ವರ್ಗ, ಜನಪ್ರಿಯತೆಯ ಆಧಾರದ ಮೇಲೆ ಹೆಸರುಗಳನ್ನು ಹುಡುಕಿ. ಸಮಾನಾರ್ಥಕ ಹೆಸರುಗಳನ್ನು ಹುಡುಕಿ.
ಕರ್ನಾಟಕ ರಾಜ್ಯ
ಕರ್ನಾಟಕದ ಈ ನಕ್ಷೆಯಲ್ಲಿ ನೀವು ಪ್ರತಿ ಜಿಲ್ಲೆಯ ಮೇಲೆ ಕ್ಲಿಕ್ ಮಾಡಿ, ಆ ಜಿಲ್ಲೆಯ ವಿವರಗಳು – ಹವಾಮಾನ, ಜನಸಂಖ್ಯೆ, ಪ್ರಮುಖ ನಗರಗಳು, ಆರ್ಥಿಕ ಚಟುವಟಿಕೆಗಳು ಮತ್ತು ಇತರೆ ಮಾಹಿತಿಗಳನ್ನು ಈ ಪುಟದ ಕೆಳಭಾಗದಲ್ಲಿ ಅಥವಾ ಬಲ ಭಾಗದಲ್ಲಿ ನೋಡಬಹುದಾಗಿದೆ. ಪುಟವನ್ನು ಅನ್ವೇಷಿಸಿ ಮತ್ತು ಕರ್ನಾಟಕದ ಬಗ್ಗೆ ಹೆಚ್ಚು ತಿಳಿದುಕೊಳ್ಳಿ!
ಹೊಸ ಜ್ಞಾನ ಪುಟಗಳು
ಹೊಸ ಪ್ರಚಲಿತ ಪುಟಗಳು





