ಭಲೇ ಭಲೇ

ಎಸ್. ಪಿ. ಬಾಲಸುಬ್ರಮಣ್ಯಂ
ಕೆ. ಕಲ್ಯಾಣ್
ದೇವಾ

ಎಲ್ಲಾ ಶಿಲ್ಪಗಳಿಗು ಒಂದೊಂದು ಹಿಂದಿನ ಕಥೆಯಿದೆ

ನನ್ನ ಶಿಲ್ಪ ಚೆಲುವೆ ಇವಳ ಮುಂದೆನ್ನ ಬದುಕಿದೆ

ಭಲೇ ಭಲೇ ಚೆಂದದ ಚೆಂದುಳ್ಳಿ ಹೆಣ್ಣು ನೀನು

ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು

ನಿನ್ನ ಚಂದ ಹೊಗಳಲು ಪದ ಪುಂಜ ಸಾಲದು

ನಿನ್ನ ಕಂಗಳ ಕಾಂತಿಗಳಿಂದಾನೆ ತಾನೇನೆ ಊರೆಲ್ಲ ಹೊಂಬೆಳಕು

ನೀನು ಹೆಜ್ಜೆಯೇ ಇಟ್ಟಲ್ಲಲ್ಲೆಲ್ಲಾನು ಕಾಲಡಿ ಹೂವಾಗಿ ಬರಬೇಕು || ಪ ||

ತಂಪು ತಂಗಾಳಿಯು ತಂದಾನ ಹಾಡಿತ್ತು ಕೇಳೋಕೆ ನಾ ಹೋದರೆ

ನಿನ್ನ ಈ ಸರಿಗಮ ಕೇಳಿತು ಸಮಸಮ ಹಂಚಿತು

ಝುಳುಝುಳು ನೀರಿಲ್ಲಿ ತಿಲ್ಲಾನ ಹಾಡಿತು ನೋಡೋಕೆ ನಾ ಬಂದರೆ

ನಿನ್ನದೇ ಥಕಥೈ ಕಂಡಿತು ಥಕದಿಮಿ ಹೆಚ್ಚಿತು

ಅಲ್ಲೊಂದು ಸುಂದರ ತೋಟವಿದೆ ಅಲ್ಲಿ ನೂರಾರು ಹೂಗಳ ರಾಶಿಯಿದೆ

ಇಲ್ಲೊಂದು ಪ್ರೀತಿಯ ಹಾಡು ಇದೆ ಇಲ್ಲಿ ಹತ್ತಾರು ಮೆಚ್ಚಿನ ಸಾಲು ಇವೆ

ಎಲ್ಲ ಸಾಲಲ್ಲು ಎಣುಕೋ ಅಕ್ಷರ ನಿಂದೇನ

ಉತ್ತರ ಇಲ್ಲದ ಸಿಹಿ ಒಗಟು ನಿನ್ನಂದ ನಿನ್ನಂದ ನಿನ್ನಂದವೇ || ೧ ||

ಅತ್ತ ಕಾಳಿದಾಸ ಇತ್ತ ರವಿವರ್ಮ ನಿನ್ನ ಹಿಂದೆ ಬಂದರು

ಅಂದವ ಹೊಗಳಲು ಸಾಧ್ಯವೇ ನಿನ್ನ ಮುಂದೆ ಮೌನವೇ

ಅತ್ತ ಊರ್ವಶಿಯು ಇತ್ತ ಮೇನಕೆಯು ನಿನ್ನ ನಡೆ ಕಂಡರೆ

ನಡುವೆ ಉಳುಕುತ್ತೆ ಅಲ್ಲವೇ ನಿನ್ನ ಬಿಟ್ಟರಿಲ್ಲವೆ

ಅಲ್ಲೊಂದು ರಾಜರ ಬೀದಿಯಿದೆ ನೀನು ಅಲ್ಲಿಂದ ತೇರಲ್ಲಿ ಏರಿ ಬಂದೆ

ಇಲ್ಲೊಂದು ಹೃದಯ ಕೋಟೆಯಿದೆ ಇಲ್ಲಿ ಎಂತೆಂಥ ಕನಸೋ ಕಾವಲಿದೆ

ಎಲ್ಲ ಕಾವಲು ದಾಟಿದ ಚೋರಿಯು ನೀನೇನಾ

ಹತ್ತಿರ ಇದ್ದರು ಬಲು ಎತ್ತರ ಎತ್ತರ ನಿನ್ನಂದ ನಿನ್ನಂದವೇ || ೨ ||

ಪರಿಕರಗಳು

ಸಾಲದ ಮಾಸಿಕ ಕಂತು (EMI)

ಸಾಲದ ಮಾಸಿಕ ಕಂತು (EMI) ಎಂದರೆ ಹಣಕಾಸು ಸಂಸ್ಥೆಯೊಂದರಿಂದ ಸಾಲ ತೆಗೆದುಕೊಂಡಾಗ, ಪ್ರತಿ ಮಾಸ ಅಥವಾ ಪ್ರತಿಕಾಲದಲ್ಲಿ ಪಾವತಿಸಬೇಕಾದ ನಿಗದಿತ ಮೊತ್ತ. ಮಾಸಿಕ ಕಂತನ್ನು ಆನ್‌ಲೈನ್‌ನಲ್ಲಿ ಲೆಕ್ಕಾಚಾರ ಮಾಡಿ.

ಹೆಸರು ಹುಡುಕಿ

ಲಿಂಗ, ಪ್ರಕಾರ, ವರ್ಗ, ಜನಪ್ರಿಯತೆಯ ಆಧಾರದ ಮೇಲೆ ಹೆಸರುಗಳನ್ನು ಹುಡುಕಿ. ಸಮಾನಾರ್ಥಕ ಹೆಸರುಗಳನ್ನು ಹುಡುಕಿ.

ಕರ್ನಾಟಕ ರಾಜ್ಯ

ಕರ್ನಾಟಕದ ಈ ನಕ್ಷೆಯಲ್ಲಿ ನೀವು ಪ್ರತಿ ಜಿಲ್ಲೆಯ ಮೇಲೆ ಕ್ಲಿಕ್ ಮಾಡಿ, ಆ ಜಿಲ್ಲೆಯ ವಿವರಗಳು – ಹವಾಮಾನ, ಜನಸಂಖ್ಯೆ, ಪ್ರಮುಖ ನಗರಗಳು, ಆರ್ಥಿಕ ಚಟುವಟಿಕೆಗಳು ಮತ್ತು ಇತರೆ ಮಾಹಿತಿಗಳನ್ನು ಈ ಪುಟದ ಕೆಳಭಾಗದಲ್ಲಿ ಅಥವಾ ಬಲ ಭಾಗದಲ್ಲಿ ನೋಡಬಹುದಾಗಿದೆ. ಪುಟವನ್ನು ಅನ್ವೇಷಿಸಿ ಮತ್ತು ಕರ್ನಾಟಕದ ಬಗ್ಗೆ ಹೆಚ್ಚು ತಿಳಿದುಕೊಳ್ಳಿ!

ಉಚಿತ ಇ-ವಾರ್ತಾಪತ್ರಕ್ಕಾಗಿ ಚಂದಾದಾರರಾಗಿ

2025 ಕನ್ನಡನುಡಿ.ಕಾಂ