ಆಚಾರವಿಲ್ಲದ ನಾಲಿಗೆ
ಉಪಾಸನೆ ಪುರಂದರ ದಾಸರು
ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ದಿಯ ಬಿಡು ನಾಲಿಗೆ

ವಿಚಾರವಿಲ್ಲದೆ ಪರರ ದೂಷಿಸುವುದಕೆ ಚಾಚಿಕೊಂಡಿರುವಂತ ನಾಲಿಗೆ

ಚಾಡಿಹೇಳಲು ಬೇಡ ನಾಲಿಗೆ ನಿನ್ನ ಬೇಡಿ ಕೊಂಬೆನು ನಾಲಿಗೆ

ರೂಢಿಗೊಡಯ ಶ್ರೀರಾಮನ ನಾಮವ ಪಾಡುತಲಿರು ಕಂಡ್ಯ ನಾಲಿಗೆ
ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ದಿಯ ಬಿಡು ನಾಲಿಗೆ
ಹರಿಯ ಸ್ಮರಣೆ ಮಾಡು ನಾಲಿಗೆ ನರಹರಿಯ ಭಜಿಸು ಕಂಡ್ಯ ನಾಲಿಗೆ
ವರದ ಪುರಂದರ ವಿಠ್ಠಲರಾಯನ ಚರಣಕಮಲವ ನೆನೆ ನಾಲಿಗೆ
ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ದಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದೂಷಿಸುವುದಕೆ ಚಾಚಿಕೊಂಡಿರುವಂತ ನಾಲಿಗೆ
ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ದಿಯ ಬಿಡು ನಾಲಿಗೆ
ಉಪಾಸನೆ
ಚಿತ್ರ ನೋಡಿ