ಕಲ್ಲು ಸಕ್ಕರೆ ಕೊಳ್ಳಿರೋ
ಕಣ್ತೆರೆದು ನೋಡು ಪಿ. ಬಿ. ಶ್ರೀನಿವಾಸ್
ಪುರಂದರದಾಸರು
ಜಿ. ಕೆ. ವೆಂಕಟೇಶ್
ಕಲ್ಲು ಸಕ್ಕರೆ ಕೊಳ್ಳಿರೋ ನೀವೆಲ್ಲರೂ
ಕಲ್ಲು ಸಕ್ಕರೆ ಕೊಳ್ಳಿರೋ
ಕಲ್ಲು ಸಕ್ಕರೆ ಸವಿ ಬಲ್ಲವರೇ ಬಲ್ಲರು
ಪುಲ್ಲ ಲೋಚನ ಶ್ರೀ ಕೃಷ್ಣ ನಾಮವೆಂಬ
ಕಲ್ಲು ಸಕ್ಕರೆ ಕೊಳ್ಳಿರೋ || ಪ ||
ಎತ್ತು ಹೇರುಗಳಿಂದ ಹೊತ್ತು ಮಾರುವುದಲ್ಲ
ಒತ್ತೋತ್ತಿ ಗೋಣಿಯೋಳ್ ತುಂಬುವುದಿಲ್ಲ
ಎತ್ತ ಹೋದರೂ ಬಾಡಿಗೆ, ಸುಂಕವಿದಕಿಲ್ಲ
ಉತ್ತಮ ಸರಕಿದು ಅತಿಲಾಭ ಬರುವಂಥ
ಕಲ್ಲು ಸಕ್ಕರೆ ಕೊಳ್ಳಿರೋ || 1 ||
ಸಂತೆ ಸಂತೆಗೆ ಹೋಗಿ ಶ್ರಮ ಪಡಿಸುವುದಲ್ಲ
ಸಂತ ಭಕ್ತರ ನಾಲಗೆ ಸವಿಗೊಂಬ
ಕಾಂತ ಪುರಂದರ ವಿಠಲ ನಾಮವೆಂಬ
ಕಲ್ಲು ಸಕ್ಕರೆ ಕೊಳ್ಳಿರೋ || ೨ ||
ಕಣ್ತೆರೆದು ನೋಡು
ಚಿತ್ರ ನೋಡಿ