ಅಂಬಿಗ ನಾ ನಿನ್ನ ನಂಬಿದೆ
ಜಗದಂಬಾರಮಣನ ನಂಬಿದೆ || ಪ ||
ತುಂಬಿದ ಹರಿಗೋಲಂಬಿಗ
ಅದಕೊಂಭತ್ತು ಛಿದ್ರವು ಅಂಬಿಗ
ಸಂಭ್ರಮದಿಂ ನೋಡಂಬಿಗ
ಅದರಿಂಬು ನೋಡಿ ನಡೆಸಂಬಿಗ || ೧ ||
ಹೊಳೆವ ಭರವ ನೋಡಂಬಿಗ
ಅದಕೆ ಸೆಳವು ಘನವಯ್ಯ ಅಂಬಿಗ
ಸುಳಿಯೊಳು ಮುಳುಗಿದೆ ಅಂಬಿಗ
ಎನ್ನ ಸೆಳೆದು ಕೊಂಡೊಯ್ಯೊ ನೀನಂಬಿಗ || ೨ ||
ಆರು ತೆರೆಯ ನೋಡಂಬಿಗ
ಅದು ಮೀರಿ ಬರುತಲಿದೆ ಅಂಬಿಗ
ಯಾರಿಂದಲಾಗದು ಅಂಬಿಗ
ಅದ ನಿವಾರಿಸಿ ದಾಟಿಸೋ ಅಂಬಿಗ || ೩ ||
ಸತ್ಯವೆಂಬುವ ಹುಟ್ಟಂಬಿಗ
ಸದಾ ಭಕ್ತಿಯೆಂಬುದೆ ಪಥ ಅಂಬಿಗ
ನಿತ್ಯ ಮೂರುತಿ ಪುರಂದರ ವಿಠಲ
ನಮ್ಮ ಮುಕ್ತಿ ಮಂಟಪಕೊಯ್ಯೊ ಅಂಬಿಗ || ೪ ||
ದೈನಂದಿನ ಮನರಂಜನೆ & ಭಾಷಾ ಜ್ಞಾನ ಇಂದಿನ ಆಟಗಳು
ಇಂದಿನ ಕನ್ನಡ ಪದ ಆಟಗಳು ಆಡಿ ನೋಡಿ!
ಕನ್ನಡ ಪದ ಸಂಪತ್ತು ಹೆಚ್ಚಿಸಿಕೊಳ್ಳಲು ಮತ್ತು ಮೆದುಳಿಗೆ ಚುರುಕು ನೀಡಲು ಪ್ರತಿದಿನ ಹೊಸ ಅಕ್ಷರ ಚೌಕ, ಪದ ಸರಪಳಿ ಹಾಗೂ ಪದ ಜೋಡಿ ಆಟಗಳನ್ನು ಆಡಿ. ಶೂನ್ಯ ಟೈಪಿಂಗ್, ೧೦೦% ಸುಲಭ ಕೌಶಲ್ಯ ಆಟಗಳು.