ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ || ಪ ||
ಪರಮಪದದೊಳಗೆ ವಿಷಧರನ ತಲ್ಪದಲಿ ನೀ
ಸಿರಿಸಹಿತ ಕ್ಷೀರವಾರಿಧಿಯೊಳಿರಲು
ಕರಿರಾಜ ಕಷ್ಟದಲಿ ಆದಿಮೂಲ ಎಂದು
ಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೇ || 1 ||
ಕಡುಕೋಪದಿಂ ಖಳನು ಖಡುಗ ಕೈಯಲಿ ಪಿಡಿದು ನಿ
ನ್ನೊಡೆಯನೆಲ್ಲಿಹನೆಂದು ಕಂಬವನು ಜಡಿಯೆ
ದೃಢಭಕುತಿಯಿಂ ಶಿಶುವು ಬಿಡದೆ ನಿನ್ನನು ಭಜಿಸೆ
ಸಡಗರದಿ ಸ್ತಂಭದಿಂದೊಡೆದೆ ನರಹರಿಯೆ || ೨ ||
ಯಮಸುತನ ರಾಣಿಗಕ್ಷಯವಸನವನಿತ್ತೆ
ಸಮಯದಲಿ ಅಜಮಿಳನ ಪೊರೆದೆ
ಸಮಾಯಾಸಮಯವುಂಟೆ ಭಕ್ತವತ್ಸಲ ನಿನಗೆ
ಕಮಾಲಾಕ್ಷ ಕಾಗಿನೆಲೆಯಾದಿ ಕೇಶವನೆ || ೩ ||
ದೈನಂದಿನ ಮನರಂಜನೆ & ಭಾಷಾ ಜ್ಞಾನ ಇಂದಿನ ಆಟಗಳು
ಇಂದಿನ ಕನ್ನಡ ಪದ ಆಟಗಳು ಆಡಿ ನೋಡಿ!
ಕನ್ನಡ ಪದ ಸಂಪತ್ತು ಹೆಚ್ಚಿಸಿಕೊಳ್ಳಲು ಮತ್ತು ಮೆದುಳಿಗೆ ಚುರುಕು ನೀಡಲು ಪ್ರತಿದಿನ ಹೊಸ ಅಕ್ಷರ ಚೌಕ, ಪದ ಸರಪಳಿ ಹಾಗೂ ಪದ ಜೋಡಿ ಆಟಗಳನ್ನು ಆಡಿ. ಶೂನ್ಯ ಟೈಪಿಂಗ್, ೧೦೦% ಸುಲಭ ಕೌಶಲ್ಯ ಆಟಗಳು.
