ಬಾಗಿಲೊಳು ಕೈಮುಗಿದು
ಕೆ.ವಿ. ಪುಟ್ಟಪ್ಪ
ಬಾಗಿಲೊಳು ಕೈ ಮುಗಿದು ಒಳಗೆ ಬಾ ಯಾತ್ರಿಕನೆ
ಶಿಲೆಯಲ್ಲವೀ ಗುಡುಯು ಕಲೆಯ ಬಲೆಯು
ಕಂಬನಿಯ ಮಾಲೆಯನು ಎದೆಯ ಬಟ್ಟಲೊಳಿಟ್ಟು
ಧನ್ಯತೆಯ ಕುಸುಮಗಳನರ್ಪಿಸಿಲ್ಲಿ
ಗಂಟೆಗಳ ದನಿಯಿಲ್ಲ ಜಾಗಟೆಗಳಿಲ್ಲಿಲ್ಲ
ಕರ್ಪೂರದಾರತಿಯ ಜ್ಯೋತಿಯಿಲ್ಲ
ಭಗವಂತನಾನಂದ ರೂಪುಗೊಂಡಿಹುದಿಲ್ಲಿ
ರಸಿಕತೆಯ ಕಡಲುಕ್ಕಿ ಹರಿವುದಿಲ್ಲಿ
ಸರಸದಿಂದುರ್ಯುತಿದೆ ಶಿಲೆಯು ರಾಮಾಯಣವನಿಲ್ಲಿ
ಬಾದರಾಯಣನಂತೆ ಭಾರತವ ಹಾಡುತಿಹುದಿಲ್ಲಿ
ಕುಶಲತೆಗೆ ಬೆರಗಾಗಿ ಮೂಕವಾಗಿದೆ ಕಾಲವಿಲ್ಲಿ
ಮೂರ್ಛೆಯಲಿ ಮೈಮರೆತು ತೇಲುವುದು ಭೂಭಾರ