ಭಾವ ಗೀತೆಗಳು

ಎಲ್ಲೋ ಹುಡುಕಿದೆ

ಎಲ್ಲೋ ಹುಡಿಕಿದೆ ಇಲ್ಲದ ದೇವರ

ಕಲ್ಲು ಮಣ್ಣುಗಳ ಗುಡಿಯೊಳಗೆ

ಇಲ್ಲೇ ಇರುವ ಪ್ರೀತಿ ಸ್ನೇಹಗಳ

ಗುರುತಿಸದಾದೆನು ನಿಮ್ಮೊಳಗೆ

ಎಲ್ಲಿದೆ ನಂದನ ಎಲ್ಲಿದೆ ಬಂಧನ

ಎಲ್ಲಾ ಇರುವುದು ನಮ್ಮೊಳಗೆ

ಒಳಗಿನ ತಿಳಿಯನು ಕಲಕದೆ ಇದ್ದರೆ

ಅಮೃತದ ಸವಿಯಿದೆ ನಾಲಗೆಗೆ

ಹತ್ತಿರವಿದ್ದೂ ದೂರ ನಿಲ್ಲುವೆವು

ನಮ್ಮ ಅಹಮ್ಮಿನ ಕೋಟೆಯಲಿ

ಎಷ್ಟು ಕಷ್ಟವೊ ಹೊಮ್ದಿಕೆ ಎಂಬುದು

ನಾಲ್ಕು ದಿನದ ಈ ಬದುಕಿನಲಿ

ಹಂಚಿಕೊಳ್ಳಿ:
ದೈನಂದಿನ ಮನರಂಜನೆ & ಭಾಷಾ ಜ್ಞಾನ ಇಂದಿನ ಆಟಗಳು

ಇಂದಿನ ಕನ್ನಡ ಪದ ಆಟಗಳು ಆಡಿ ನೋಡಿ!

ಕನ್ನಡ ಪದ ಸಂಪತ್ತು ಹೆಚ್ಚಿಸಿಕೊಳ್ಳಲು ಮತ್ತು ಮೆದುಳಿಗೆ ಚುರುಕು ನೀಡಲು ಪ್ರತಿದಿನ ಹೊಸ ಅಕ್ಷರ ಚೌಕ, ಪದ ಸರಪಳಿ ಹಾಗೂ ಪದ ಜೋಡಿ ಆಟಗಳನ್ನು ಆಡಿ. ಶೂನ್ಯ ಟೈಪಿಂಗ್, ೧೦೦% ಸುಲಭ ಕೌಶಲ್ಯ ಆಟಗಳು.