ಕರುಣಾಳು ಬಾ ಬೆಳಕೆ ಮಸುಕಿದೀ ಮಬ್ಬಿನಲಿ
ಕೈ ಹಿಡಿದು ನಡೆಸೆನ್ನನು
ಇರುಳು ಕತ್ತಲೆಯ ಗವಿ ಮನೆ ದೂರ ಕನಿಕರಿಸಿ
ಕೈ ಹಿಡಿದು ನಡೆಸೆನ್ನನು|| ಪ ||
ಹೇಳಿ ನನ್ನಡಿಯಿಡಿಸು ಬಲುದೂರ ನೋಟವನು
ಕೇಳನೊಡನೆಯೆ ಸಾಕು ನನಗೊಂದು ಹೆಜ್ಜೆ
ಮುನ್ನ ಇಂತಿರದಾದೆ ನಿನ್ನ ಬೇಡದೆ ಹೋದೆ
ಕೈ ಹಿಡಿದು ನಡೆಸೆನ್ನನು|| 1 ||
ಇಷ್ಟುದಿನ ಸಲಹಿರುವೆ ಈ ಮೂರ್ಖನನು ನೀನು ಮುಂದೆಯೂ
ಕೈ ಹಿಡಿದು ನಡೆಸದಿಹೆಯಾ
ಕಷ್ಟದಡವಿಯ ಕಳೆದು ಬೆಟ್ಟ ಹೊಳೆಗಳ ಹಾದು
ಇರುಳನ್ನು ನೂಕದಿಹೆಯಾ?|| 2 ||
ಬೆಳಗಾಗ ಹೊಳೆಯದೆಯೆ ಹಿಂದೊಮ್ಮೆ ನಾನೊಲಿದು
ಈ ನಡುವೆ ಕಳಕೊಂಡೆ ದಿವ್ಯ ಮುಖ ನಗುತ|| 3 ||
ದೈನಂದಿನ ಮನರಂಜನೆ & ಭಾಷಾ ಜ್ಞಾನ ಇಂದಿನ ಆಟಗಳು
ಇಂದಿನ ಕನ್ನಡ ಪದ ಆಟಗಳು ಆಡಿ ನೋಡಿ!
ಕನ್ನಡ ಪದ ಸಂಪತ್ತು ಹೆಚ್ಚಿಸಿಕೊಳ್ಳಲು ಮತ್ತು ಮೆದುಳಿಗೆ ಚುರುಕು ನೀಡಲು ಪ್ರತಿದಿನ ಹೊಸ ಅಕ್ಷರ ಚೌಕ, ಪದ ಸರಪಳಿ ಹಾಗೂ ಪದ ಜೋಡಿ ಆಟಗಳನ್ನು ಆಡಿ. ಶೂನ್ಯ ಟೈಪಿಂಗ್, ೧೦೦% ಸುಲಭ ಕೌಶಲ್ಯ ಆಟಗಳು.
