ನಾಯಿ ಮರಿ ನಾಯಿ ಮರಿ ತಿಂಡಿ ಬೇಕೇ
ತಿಂಡಿ ಬೇಕು ತೀರ್ಥ ಬೇಕು ಎಲ್ಲಾ ಬೇಕು || ಪ ||
ನಾಯಿ ಮರಿ ನಿನಗೆ ತಿಂಡಿ ಏಕೆ ಬೇಕು?
ತಿಂದು ಗಟ್ಟಿಯಾಗಿ ಮನೆಯ ಕಾಯಬೇಕು || 1 ||
ನಾಯಿ ಮರಿ ಕಳ್ಳ ಬಂದರೇನು ಮಾಡುವೇ?
ಬೌ ಬೌ ಎಂದು ಕೂಗಿ ಕರೆಯುವೆ || ೨ ||
ಜಾಣ ಮರಿ ನಾನು ಹೋಗಿ ತಿಂಡಿ ತರುವೆನು
ನಾನು ನಿನ್ನ ಮನೆಯನ್ನು ಕಾಯುತಿರುವೆನು || ೩ ||
ದೈನಂದಿನ ಮನರಂಜನೆ & ಭಾಷಾ ಜ್ಞಾನ ಇಂದಿನ ಆಟಗಳು
ಇಂದಿನ ಕನ್ನಡ ಪದ ಆಟಗಳು ಆಡಿ ನೋಡಿ!
ಕನ್ನಡ ಪದ ಸಂಪತ್ತು ಹೆಚ್ಚಿಸಿಕೊಳ್ಳಲು ಮತ್ತು ಮೆದುಳಿಗೆ ಚುರುಕು ನೀಡಲು ಪ್ರತಿದಿನ ಹೊಸ ಅಕ್ಷರ ಚೌಕ, ಪದ ಸರಪಳಿ ಹಾಗೂ ಪದ ಜೋಡಿ ಆಟಗಳನ್ನು ಆಡಿ. ಶೂನ್ಯ ಟೈಪಿಂಗ್, ೧೦೦% ಸುಲಭ ಕೌಶಲ್ಯ ಆಟಗಳು.
