ನೀ ಹಿಂಗ ನೋಡಬ್ಯಾಡ ನನ್ನ

ನೀ ಹಿಂಗ ನೋಡಬ್ಯಾಡ ನನ್ನ, ನೀ ಹಿಂಗ ನೋಡಿದರ ನನ್ನ,
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ? || ಪ ||
ಸಂಸಾರ ಸಾಗರದಾಗ ಲೆಕ್ಕವಿರದಷ್ಟು ದುಃಖದ ಬಂಡಿ,
ನಾ ಬಲ್ಲೆ ನನಗೆ ಗೊತ್ತಿಲ್ಲದಿದ್ದರೂ, ಎಲ್ಲಿ ಆಚೆಯ ದಂಡಿ
ಮಲಗಿರುವ ಕೂಸು ಮಲಗಿರಲಿ ಅಲ್ಲಿ, ಮುಂದಿನದು ದೇವರ ಚಿತ್ತ,
ನಾ ತಡಿಲಾರೆ ಅದು ಯಾಕ ನೋಡತೀ, ಮತ್ತ ಮತ್ತ ನೀ ಇತ್ತ
ತಂಬಳ ಹಾಕದ ತುಂಬಾ ಕೆಂಪು ಗಿಣಿ ಗದಕ ಹಣ್ಣಿನ ಹಂಗ,
ಇದ್ದಂತ ತುಟಿಯ ಬಣ್ಣೆತ್ತ ಹಾರಿತು, ಯಾವ ಘಳಿಗೆ ಹಿಂಗ?
ಈ ಗತ್ತಗಲ್ಲ ಹನಿ ಕಣ್ಣು ಕಂಡು, ಮಾರಿಗೆ ಮಾರಿಯ ರೀತಿ,
ಸವನ ತನ್ನ ಕೈ ಸವರಿತಿಲ್ಲಿ, ಬಂತೆನಗ ಇಲ್ಲದ ಭೀತಿ || 1 ||
ಇಬ್ಬನಿ ತೊಳೆದರು ಹಾಲು ಮೆಟ್ಟಿದ ಕವಲಿ ಕಾಂತಿಯ ಹಣ್ಣು
ಹೊಳೆ ಹೊಳೆವ ಹಂಗ ಕಣ್ಣಿರುವ ಹೆಣ್ಣ, ಹೇಳು ನಿನ್ನವೇನ ಈ ಕಣ್ಣು,
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲ,
ಹುಣ್ಣಿಮಿ ಚಂದಿರನ ಹೆಣ ಬಂತೋ ಮುಗಿಲಾಗ ತೆಲತಾ ಹಗಲ,
ನಿನ್ನ ಕಣ್ಣಿನಾಗ ಕಾಲೂರಿ ಮಳೆಯೂ, ನಡ ನಡಕ ಹುಚ್ಚು ನಗಿ ಯಾಕ?
ಹನಿ ಒಡೆಯಲಿಕ್ಕೆ ಬಂದಂತ ಮೋಡ ತಡದಂಗ ಗಾಳಿಯ ನೆವಕ,
ಅತ್ತರೆ ಅತ್ತು ಬಿಡು ಹೊನಲು ಬರಲಿ, ನಾಕ್ಯಾಕ ಮರಸತಿ ದುಃಖ,
ಎದೆ ಬಿರಿಸಿ ಕೆಡವು ಬಿರಿಗಣ್ಣು ಬ್ಯಾಡ ತುಟಿ ಕಚ್ಚಿ ಹಿಡಿಯದಿರು ಬಿಕ್ಕ || ೨ ||
ಪರಿಕರಗಳು
ಸಾಲದ ಮಾಸಿಕ ಕಂತು (EMI)
ಸಾಲದ ಮಾಸಿಕ ಕಂತು (EMI) ಎಂದರೆ ಹಣಕಾಸು ಸಂಸ್ಥೆಯೊಂದರಿಂದ ಸಾಲ ತೆಗೆದುಕೊಂಡಾಗ, ಪ್ರತಿ ಮಾಸ ಅಥವಾ ಪ್ರತಿಕಾಲದಲ್ಲಿ ಪಾವತಿಸಬೇಕಾದ ನಿಗದಿತ ಮೊತ್ತ. ಮಾಸಿಕ ಕಂತನ್ನು ಆನ್‌ಲೈನ್‌ನಲ್ಲಿ ಲೆಕ್ಕಾಚಾರ ಮಾಡಿ.
ಹೆಸರು ಹುಡುಕಿ
ಲಿಂಗ, ಪ್ರಕಾರ, ವರ್ಗ, ಜನಪ್ರಿಯತೆಯ ಆಧಾರದ ಮೇಲೆ ಹೆಸರುಗಳನ್ನು ಹುಡುಕಿ. ಸಮಾನಾರ್ಥಕ ಹೆಸರುಗಳನ್ನು ಹುಡುಕಿ.
ಕರ್ನಾಟಕ ರಾಜ್ಯ
ಕರ್ನಾಟಕದ ಈ ನಕ್ಷೆಯಲ್ಲಿ ನೀವು ಪ್ರತಿ ಜಿಲ್ಲೆಯ ಮೇಲೆ ಕ್ಲಿಕ್ ಮಾಡಿ, ಆ ಜಿಲ್ಲೆಯ ವಿವರಗಳು – ಹವಾಮಾನ, ಜನಸಂಖ್ಯೆ, ಪ್ರಮುಖ ನಗರಗಳು, ಆರ್ಥಿಕ ಚಟುವಟಿಕೆಗಳು ಮತ್ತು ಇತರೆ ಮಾಹಿತಿಗಳನ್ನು ಈ ಪುಟದ ಕೆಳಭಾಗದಲ್ಲಿ ಅಥವಾ ಬಲ ಭಾಗದಲ್ಲಿ ನೋಡಬಹುದಾಗಿದೆ. ಪುಟವನ್ನು ಅನ್ವೇಷಿಸಿ ಮತ್ತು ಕರ್ನಾಟಕದ ಬಗ್ಗೆ ಹೆಚ್ಚು ತಿಳಿದುಕೊಳ್ಳಿ!
ಹೊಸ ಪ್ರಚಲಿತ ಪುಟಗಳು





