ಜೋಗದ ಸಿರಿ ಬೆಳಕಿನಲ್ಲಿ, ತುಂಗೆಯ ತೆನೆ ಬಳುಕಿನಲ್ಲಿ

ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ

ನಿತ್ಯಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ

ನಿತ್ಯೋತ್ಸವ ತಾಯಿ ನಿತ್ಯೋತ್ಸವ || ಪ ||

ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿ

ಗತಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ

ಓಲೆಗರಿಯ ಸಿರಿಗಳಲ್ಲಿ ದೇಗುಲಗಳ ಭಿತ್ತಿಗಳಲಿ

ನಿತ್ಯೋತ್ಸವ ತಾಯಿ ನಿತ್ಯೋತ್ಸವ || 1 ||

ಹಲವೆನ್ನದ ಹಿರಿಮೆಯೆ, ಕುಲವೆನ್ನದ ಗರಿಮೆಯೆ

ಸದ್ವಿಕಾಸಶೀಲ ನುಡಿಯ ಲೋಕಾಮೃತ ಸೀಮೆಯೆ

ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ

ನಿತ್ಯೋತ್ಸವ ತಾಯಿ ನಿತ್ಯೋತ್ಸವ || ೨ ||

ಹಂಚಿಕೊಳ್ಳಿ:
ದೈನಂದಿನ ಮನರಂಜನೆ & ಭಾಷಾ ಜ್ಞಾನ ಇಂದಿನ ಆಟಗಳು

ಇಂದಿನ ಕನ್ನಡ ಪದ ಆಟಗಳು ಆಡಿ ನೋಡಿ!

ಕನ್ನಡ ಪದ ಸಂಪತ್ತು ಹೆಚ್ಚಿಸಿಕೊಳ್ಳಲು ಮತ್ತು ಮೆದುಳಿಗೆ ಚುರುಕು ನೀಡಲು ಪ್ರತಿದಿನ ಹೊಸ ಅಕ್ಷರ ಚೌಕ, ಪದ ಸರಪಳಿ ಹಾಗೂ ಪದ ಜೋಡಿ ಆಟಗಳನ್ನು ಆಡಿ. ಶೂನ್ಯ ಟೈಪಿಂಗ್, ೧೦೦% ಸುಲಭ ಕೌಶಲ್ಯ ಆಟಗಳು.