ಜ್ಞಾನಪೀಠ ಪ್ರಶಸ್ತಿ ಪಡೆದ ಏಳನೇಯ ಕನ್ನಡಿಗ ಹಾಗೂ ಕನ್ನಡದ ಶ್ರೇಷ್ಠ ನಾಟಕಕಾರರಲ್ಲಿ ಒಬ್ಬರು ಗಿರೀಶ್ ಕಾರ್ನಾಡರು. ಬಹುಮುಖ ಪ್ರತಿಭೆಯ ಗಿರೀಶ್ ಕಾರ್ನಾಡರು ಕನ್ನಡದಲ್ಲಿ ಹೊಸ ಅಲೆಯ ನಾಟಕಗಳನ್ನು ರಚಿಸಿ, ರಂಗಪ್ರಯೋಗ ಮಾಡಿದ್ದಲ್ಲದೆ, ನಾಟಕ ರಂಗಭೂಮಿ ಹಾಗೂ ಸಿನಿಮಾ ಕ್ಷೇತ್ರಗಳಲ್ಲಿ ಅಮೂಲ್ಯ ಕೊಡುಗೆ ನೀಡಿದ್ದಾರೆ.
ಅನೇಕ ಕಲಾತ್ಮಕ ಚಿತ್ರಗಳಲ್ಲಿ ಅಭಿನಯ, ಚಿತ್ರಕಥೆ, ಸಂಭಾಷಣೆ ನೀಡಿ ಅನೇಕ ಪ್ರಶಸ್ತಿ ಗೌರವಗಳಿಗೆ ಭಾಜನದಾಗಿದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಚಿತ್ರಗಳಲ್ಲಿ ಅಭಿನಯಿಸಿದ್ದಲ್ಲದೆ ನಿರ್ದೇಶನ ಕೂಡ ಮಾದಿದ್ದಾರೆ. ದೂರದರ್ಶನದ ಧಾರಾವಾಹಿಗಳಲ್ಲಿ ಅಭಿನಯಿಸಿ, ನಿರ್ದೇಶಿಸಿ ಜನಪ್ರಿಯತೆ ಗಳಿಸಿದ್ದಾರೆ.